‘ಅತ್ಯಾಚಾರಿಗಳನ್ನು ಎನ್​ಕೌಂಟರ್ ಮಾಡಿ’ – ಉನ್ನಾವೋ ಸಂತ್ರಸ್ತೆಯ ತಂದೆ

ದೆಹಲಿ : 

       ಉನ್ನಾವೋ ಅತ್ಯಾಚಾರದ ಆರೋಪಿಗಳನ್ನು ಸಹ ಹೈದರಾಬಾದ್ ಎನ್ ಕೌಂಟರ್ ಮಾದರಿಯಲ್ಲೇ ಶಿಕ್ಷೆ ನೀಡಿ ಎಂದು ಸಂತ್ರಸ್ತೆಯ ತಂದೆ ಒತ್ತಾಯಿಸಿದ್ದಾರೆ.

      ಎರಡು ದಿನಗಳಿಂದ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಉನ್ನಾವೋ ಸಂತ್ರಸ್ತೆ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಂತ್ರಸ್ತೆ ತಂದೆ, ಅತ್ಯಾಚಾರಿಗಳನ್ನು ಹೈದರಾಬಾದ್ ಪೊಲೀಸರು ಹೇಗೆ ಎನ್‍ಕೌಂಟರ್ ಮಾಡಿದ್ದಾರೋ ಹಾಗೆಯೇ ನನ್ನ ಮಗಳ ಮೇಲೆ ಅತ್ಯಾಚಾರ ಮಾಡಿದ ಆರೋಪಿಗಳನ್ನು ಶಿಕ್ಷೆಯಾಗಲಿ. ಆರೋಪಿಗಳಿಗೆ ಎನ್‍ಕೌಂಟರ್ ಮಾಡಿ ಅಥವಾ ಗಲ್ಲಿಗೇರಿಸಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ನನಗೆ ಹಣದ ಆಮಿಷವಿಲ್ಲ. ನಾನು ಕೇಳುವುದು ಒಂದೇ ವಿಷಯ. ನನ್ನ ಮಗಳ ಸಾವಿಗೆ ನ್ಯಾಯ ಸಿಗಲಿ ಎಂದು ಹೇಳಿದರು.

ಆಸ್ಪತ್ರೆಯಲ್ಲೆ ಕೊನೆಯುಸಿರೆಳೆದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ!!

      ನವೆಂಬರ್ 29 ರಂದು ಹತ್ಯೆಯಾಗಿರುವ ಕಾಮುಕರು ಪ್ರಿಯಾಂಕಾ ರೆಡ್ಡಿ ಮೇಲೆ ಅಟ್ಟಹಾಸ ಮೆರೆದಿದ್ದರು. ಪ್ರಿಯಾಂಕಾ ರೆಡ್ಡಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದ ನಾಲ್ವರು ಕಾಮುಕರು, ನಂತರ ಆಕೆಯನ್ನು ಹತ್ಯೆ ಮಾಡಿ, ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು. ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡಿತ್ತು. ಇದರಂತೆ ಗುರುವಾರ ಬೆಳಗಿನ ಜಾವ ತನಿಖೆ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಪೊಲೀಸರು ಆರೋಪಿಗಳನ್ನು ಕರೆದುಕೊಂಡು ಹೋಗಿದ್ದು, ಈ ವೇಳೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಅಲ್ಲದೆ, ಪೊಲೀಸರ ಬಳಿಯಿದ್ದ ಪಿಸ್ತೂಲನ್ನು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಕಾಮುಕರ ಮೇಲೆ ಎನ್’ಕೌಂಟರ್ ನಡೆಸಿ ಹತ್ಯೆ ಮಾಡಿದ್ದರು. ಪೊಲೀಸರ ಈ ಕಾರ್ಯಕ್ಕೆ ದೇಶದಾದ್ಯಂತ ಶ್ಲಾಘನೆಗಳು ವ್ಯಕ್ತವಾಗತೊಡಗಿವೆ.

     ಈ ನಡುವಲ್ಲೇ ಕಾಮುಕರ ಅಟ್ಟಹಾಸಕ್ಕೆ ನಲುಗಿದ್ದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದು, ಹೈದರಾಬಾದ್ ರೀತಿಯಲ್ಲಿಯೇ ಈ ಪ್ರಕರಣದ ಅತ್ಯಾಚಾರಿಗಳಿಗೂ ಗುಂಡಿಕ್ಕಿ ಹತ್ಯೆ ಮಾಡಬೇಕೆಂಬ ವ್ಯಾಪಕ ಆಕ್ರೋಶ ಸಾಮಾಜಿಕ ಜಾಲತಾಣದದಲ್ಲಿ ಭುಗಿಲೆದ್ದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link