ಲಕ್ನೋ:
“ನಾನು ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ” ಎನ್ನುವ ಮೂಲಕ ಬಹುಜನ ಸಮಾಜವಾದಿ ಪಕ್ಷದ ನಾಯಕಿ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಚುನಾವಣೆಗೆ ಸ್ಪರ್ಧಿಸಿದರೆ ತಮ್ಮ ಕ್ಷೇತ್ರದ ಮೇಲೆಯೇ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ. ಅದರಿಂದ ಉಳಿದ ಕ್ಷೇತ್ರಗಳಲ್ಲಿ ಉತ್ತಮ ಪ್ರದರ್ಶನ ನೀಡುವುದಕ್ಕಾಗದೆ ಇರಬಹುದು. ನಾನೊಬ್ಬಳೇ ಗೆಲ್ಲುವುದಕ್ಕಿಂತಲೂ ಮೈತ್ರಿ ಕೂಟವನ್ನು ಗೆಲ್ಲಿಸುವುದು ನನ್ನ ಉದ್ದೇಶ. ಆದ್ದರಿಂದ ಚುನಾವಣೆಗೆಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ,” ಎಂದು ಅವರು ಹೇಳಿದರು.
ರಾಜ್ಯಸಭೆ ಮಾಜಿ ಸಂಸದೆ ಮಾಯಾವತಿ ಅವರು ಈ ಬಾರಿ ಲೋಕಸಭಾ ಚುನಾವನೆಗೆ ಸ್ಪರ್ಧಿಸಬಹುದು ಎಂದು ಊಹಿಸಲಾಗಿತ್ತು. ಪ್ರಧಾನಿ ಪಟ್ಟದ ಮೇಲೂ ಕಣ್ಣೀಟ್ಟಿರುವ ಕಾರಣ ಅವರು ಕಣಕ್ಕಿಳಲಿಯುತ್ತಾರೆ ಎಂದು ನೀರೀಕ್ಷಿಸಲಾಗಿತ್ತು. ಆದರೆ ತಾವು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ