ಲಕ್ನೋ :
ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಎನ್ಕೌಂಟರ್ ನಲ್ಲಿ ಭಾಗಿಯಾಗಿದ್ದ ಓರ್ವ ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಕೊರೊನಾ ಸೋಂಕಿತ ಪೊಲೀಸ್ ಜೊತೆ ಇತರೆ ಸಿಬ್ಬಂದಿ ಪ್ರಯಾಣಿಸಿದ್ದರು. ಹೀಗಾಗಿ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಪೊಲೀಸರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಎನ್ಕೌಂಟರ್ ನಲ್ಲಿ ಭಾಗಿಯಾಗಿದ್ದ ಎಲ್ಲ ಪೊಲೀಸ್ ಸಿಬ್ಬಂದಿ ಸಹ ಸೆಲ್ಫ್ ಕ್ವಾರಂಟೈನ್ ನಲ್ಲಿದ್ದಾರೆ. ಕಾನ್ಪುರ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪೊಲೀಸರು ಮದ್ಯಪ್ರದೇಶದ ಉಜ್ಜೈನ್ ನಲ್ಲಿರುವ ಮಹಾಕಾಳ ದೇವಸ್ಥಾನದಲ್ಲಿ ಬಂಧಿಸಿದ್ದರು.
ಈ ವೇಳೆ ವಿಕಾಸ್ ದುಬೆಯನ್ನು ಉತ್ತರ ಪ್ರದೇಶಕ್ಕೆ ಕರೆದೊಯ್ಯುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಎನ್ಕೌಂಟರ್ ಮಾಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ