ಏ.1 ರಿಂದ 45 ವಯಸ್ಸಿನ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ!!

ನವದೆಹಲಿ: 

     ಏ.1 ರಿಂದ 45 ವಯಸ್ಸಿನ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

     ಕೇಂದ್ರ ಸರ್ಕಾರದ ಪರವಾಗಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, “ಏ.1 ರಿಂದ 45 ವಯಸ್ಸಿನ ಮೇಲ್ಪಟ್ಟವರೂ ಸಹ ಕೊರೋನಾ ಲಸಿಕೆಯನ್ನು ಪಡೆಯಬಹುದಾಗಿದೆ. ಈಗಾಗಲೇ ಕೆಲವು ಆರೋಗ್ಯ ಸಮಸ್ಯೆ (co-morbidities) ಇಲ್ಲದವರೂ ಸಹ ಕೋವಿಡ್-19 ಲಸಿಕೆಯನ್ನು ಪಡೆಯಬಹುದಾಗಿದೆ” ಎಂದು ತಿಳಿಸಿದ್ದಾರೆ.

    ಅರ್ಹ ವ್ಯಕ್ತಿಗಳು ತಕ್ಷಣವೇ ನೋಂದಣಿ ಮಾಡಿಸಿಕೊಂಡು ಲಸಿಕೆ ಹಾಕಿಸಿಕೊಳ್ಳಬೇಕೆಂದು ಮನವಿ ಮಾಡುತ್ತಿರುವುದಾಗಿ ಜಾವ್ಡೇಕರ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap