ಮುಂಬೈ:
ಭಾರತದ ಪ್ರಥಮ ದರ್ಜೆ ಕ್ರಿಕೆಟ್‌ನ ಅತ್ಯಂತ ಹಿರಿಯ ಕ್ರಿಕೆಟಿಗ ವಸಂತ್ ರೈಜಿ ಅವರು ಇಂದು ವಿಧಿವಶರಾಗಿದ್ದಾರೆ.
ಅವರಿಗೆ 100 ವರ್ಷ 139 ದಿನಗಳಾಗಿದ್ದವು. ಇಂದು ರಾತ್ರಿ 2.20 ರಲ್ಲಿ ನಿದ್ರೆ ಮಾಡುತ್ತಿರುವಾಗ ದಕ್ಷಿಣ ಮುಂಬೈನ ವಾಲ್ಕೇಶ್ವರ್‌ದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ,” ಎಂದು ಅವರ ಸೊಸೆ ಸುದರ್ಶನ್ ನಾನವತಿ ಪಿಟಿಐಗೆ ಮಾಹಿತಿ ನೀಡಿದ್ದಾರೆ.
ದಕ್ಷಿಣ ಮುಂಬೈನ ವಾಲ್ಕೇಶ್ವರ್‌ನ ತಮ್ಮ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದ ಅವರು, ತಮ್ಮ ಪತ್ನಿ ಹಾಗೂ ಇಬ್ಬರೂ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ದಕ್ಷಿಣ ಮುಂಬೈನ ಚಂದನ್‌ವಾಡಿ ಸ್ಮಶಾನದಲ್ಲಿ ಇವರ ಅಂತ್ಯ ಸಂಸ್ಕಾರ ನಡೆಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ