ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆ ವಿಧಿವಶ!!

ಉಡುಪಿ: 

      ಹಿರಿಯ ಪತ್ರಕರ್ತ ರವಿರಾಜ ವಳಲಂಬೆ ಅವರು ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

      ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆ ಸೇರುವ ಮೊದಲೇ ಕೊನೆಯುಸಿರೆಳೆದಿದ್ದಾರೆ. ಎದೆ ನೋವು ಬಂದ ಕೂಡಲೇ ನಗರದ ಮಿಷನ್ ಕಂಪೌಂಡ್ ನಲ್ಲಿರುವ ಲೋಂಬಾರ್ಡ್ ಆಸ್ಪತ್ರೆಗೆ ಸ್ನೇಹಿತನ ಜೊತೆ ತೆರಳಿದ್ದರು.

     ವಿಪರೀತ ಎದೆನೋವು ಆದಾಗ ಕೂಡಲೇ ಆದರ್ಶ ಆಸ್ಪತ್ರೆಗೆ ಸ್ವತಃ ರವಿರಾಜ್ ಕರೆ ಮಾಡಿ ಬರುತ್ತಿರುವುದಾಗಿ ಹೇಳಿದ್ದಾರೆ. ಡಾ||ಚಂದ ಶೇಖರ್ ಅವರಿಗೆ ಕರೆ ಮಾಡಿದ ಕೂಡಲೇ ಕಾರಿನೊಳಗೆ ಕುಸಿದಿದ್ದಾರೆ. ಆಸ್ಪತ್ರೆಗೆ ಹೋಗುವ ಮೊದಲೇ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ.

      ಉಡುಪಿಯಲ್ಲಿ ಈಟಿವಿ ವರದಿಗಾರನಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ಬೆಳವಣಿಗೆಗಳ ಹಿರಿಯ ವರದಿಗಾರನಾಗಿ ಕೆಲಸ ಮಾಡಿದ್ದರು. ಅದಾದ ಬಳಿಕ ಉಡುಪಿಯ ಸ್ಥಳೀಯ ವಾಹಿನಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.

      ಪ್ರಗತಿಪರ ಚಿಂತನೆಯನ್ನು ತಮ್ಮ ಜೀವನದಲ್ಲಿ ಮತ್ತು ವೃತ್ತಿ ಬದುಕಿನಲ್ಲಿ ಅಳವಡಿಸಿಕೊಂಡಿದ್ದ ಇವರು ಮಿತಭಾಷಿಯಾಗಿದ್ದರು. ರಾಜಕೀಯ  ವಿಚಾರಗಳ ಕುರಿತಾಗಿ ಆಳವಾದ ಜ್ಞಾನವನ್ನು ಹೊಂದಿದ್ದ ರವಿರಾಜ್ ಅವರು ಹಲವು ಸ್ಥಳೀಯ ಸಮಸ್ಯೆಗಳಿಗೂ ಧ್ವನಿಯಾಗುತ್ತಿದ್ದರು.

     ರವಿರಾಜ್ ಪತ್ನಿ, ಅವಳಿ- ಜವಳಿ ಪುತ್ರಿಯರನ್ನು ಹೊಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನವರಾದ ರವಿರಾಜ್ ಅವರ ಅಂತ್ಯಕ್ರಿಯೆ ವಳಲಂಬೆಯಲ್ಲೇ ನಡೆಯಲಿದೆ ಎನ್ನಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link