ವಿಜಯಪುರ :
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಸಿಎಂ ಬಿ. ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ತುಂಬಿದ ಕೃಷ್ಣೆಗೆ ಬಾಗೀನ ಅರ್ಪಣೆ ಮಾಡಿದ ನಂತರ ಸುದ್ದಿಗಾರರ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾತನಾಡಿದರು . ಆಲಮಟ್ಟಿ ಕೃಷ್ಣಾ ಜಲಾಶಯದ ಎತ್ತರಕ್ಕೆ ನಾವು ಬದ್ಧರಾಗಿದ್ದೇವೆ ರಾಜ್ಯದ ಪಾಲಿನ ನೀರನ್ನು ಸದ್ಬಳಕೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಮುಂದಿನ ಬಜೆಟ್ ನಲ್ಲಿ ಆಲಮಟ್ಟಿ ಯಿಂದ ಸಂತ್ರಸ್ತರಾಗುವ 20 ಹಳ್ಳಿಗಳ ಸ್ಥಳಾಂತರಕ್ಕೆ ಹಣ ಮೀಸಲಿಡುತ್ತೇವೆ. ಮುಂದಿನ ಬಜೆಟ್ ನಲ್ಲಿ 20 ಸಾವಿರ ಕೋಟಿ. ಹಣವನ್ನು ಮೀಸಲುಡುತ್ತೇನೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ