ಎನ್‌ಕೌಂಟರ್‌ನಲ್ಲಿ ರೌಡಿ ಶೀಟರ್ ವಿಕಾಸ್ ದುಬೆ ಫಿನಿಶ್..!

ಕಾನ್ಪುರ:

     ಉತ್ತರಪ್ರದೇಶದ 8 ಪೋಲೀಸರನ್ನು ಹತ್ಯೆಗೈದ ಪ್ರಮುಖ ಆರೋಪಿ ರೌಡಿ ಶೀಟರ್ ವಿಕಾಸ್ ದುಬೆ ಪೋಲೀಸ್ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ.

     ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜಯನಿಯಲ್ಲಿ ಪೊಲೀಸರು ಗುರುವಾರ ಬಂಧಿಸಿದ್ದರು. ಆತನನ್ನು ಮಧ್ಯಪ್ರದೇಶ ಪೊಲೀಸರು ಉತ್ತರ ಪ್ರದೇಶ ಪೊಲೀಸರಿಗೆ ಹಸ್ತಾಂತರಿಸಿದ್ದು, ಕಾನ್ಪುರಕ್ಕೆ ಕರೆತರುವ ವೇಳೆ ಪೊಲೀಸರ ಬೆಂಗಾವಲು ವಾಹನ ಮಗುಚಿದೆ. ಈ ನಡುವೆ ಪರಾರಿಯಾಗಲು ಯತ್ನಿಸಿದ ವಿಕಾಸ್‌ ದುಬೆ ಎನ್‌ಕೌಂಟರ್‌ನಿಂದ ಸಾವನ್ನಪ್ಪಿರುವುದಾಗಿ ಉತ್ತರ ಪ್ರದೇಶ ಪೊಲೀಸರು ದೃಢಪಡಿಸಿದ್ದಾರೆ.

      ದುಬೆ ಹಾಗೂ ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (ಎಸ್ಟಿಎಫ್) ನಡುವೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಪೊಲೀಸರು ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನೂ ಸಹ ಲಾಲಾ ಲಜಪತ್ ರಾಯ್ ಅಥವಾ ಹಲ್ಲೆಟ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

      ಈ ಬಗ್ಗೆ ಮಾಹಿತಿ ನೀಡಿರುವ ಪಶ್ಚಿಮ ಕಾನ್ಪುರದ ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸ್ ವಾಹನ ಉರುಳಿಬಿದ್ದ ಬೆನ್ನಲ್ಲೇ ಸಿಬ್ಬಂದಿಯೊಬ್ಬರ ಗನ್ ಕಸಿದುಕೊಂಡು ಗ್ಯಾಂಗ್ಸ್ಟರ್ ವಿಕಾಸ್ ದುಬೆ, ತಪ್ಪಿಸಿಕೊಳ್ಳಲು ಯತ್ನಿಸಿದ. ಈ ವೇಳೆ ಶರಣಾಗತಿ ಆಗುವಂತೆ ಕೇಳಲಾಯಿತು. ಆದರೆ, ಪೊಲೀಸರ ಮೇಲೆಯೇ ದುಬೆ ಗುಂಡಿನ ದಾಳಿ ನಡೆಸಿದ್ದ.

      ಆತ್ಮರಕ್ಷಣೆಗಾಗಿ ನಮ್ಮ ಪೊಲೀಸರು ಸಹ ದುಬೆ ವಿರುದ್ಧ ಗುಂಡಿನ ದಾಳಿ ನಡೆಸಿದರು. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಲಾಲಾ ಲಜಪತ್ ರಾಯ್ ಆಸ್ಪತ್ರೆ ಅಥವಾ ಹ್ಯಾಲೆಟ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

     ಒಂದು ವಾರದ ಹಿಂದಷ್ಟೇ ರೌಡಿ ವಿಕಾಸ್ ದುಬೆ ಇರುವ ಪ್ರದೇಶದ ಬಗ್ಗೆ ಪಕ್ಕಾ ಮಾಹಿತಿ ಪಡೆದು 50 ಪೊಲೀಸರ ತಂಡ ಆತನನ್ನು ಬಂಧಿಸಲು ತೆರಳಿತ್ತು. ಆಗ ವಿಕಾಸ್ ದುಬೆ ಮತ್ತು ಆತನ ಸಹಚರರು ಪೊಲೀಸರ ಆಯುಧಗಳನ್ನೇ ವಶಪಡಿಸಿಕೊಂಡು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ 8 ಮಂದಿ ಪೊಲೀಸರು ಮೃತಪಟ್ಟಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap