ಮುಂಬೈ :
ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪತ್ನಿಬಾಲಿವುಡ್ ನಟಿ ಅನುಷ್ಕಾ ಶರ್ಮಾ ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ದಂಪತಿ ಸಂಭ್ರದಲ್ಲಿದ್ದಾರೆ.
ಈ ಬಗ್ಗೆ ವಿರಾಟ್ ಕೊಹ್ಲಿ ಸ್ವತಃ ಟ್ವೀಟ್ ಮಾಡಿದ್ದು, ನಾವು ರೋಮಾಂಚನಗೊಂಡಿದ್ದೇವೆ. ಇಂದು ಮಧ್ಯಾಹ್ನ ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅನುಷ್ಕಾ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ನಮಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
— Virat Kohli (@imVkohli) January 11, 2021
ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರ ಡಿ11ರಂದು ವಿವಾಹವಾಗಿದ್ದರು. ಕಳೆದ ವರ್ಷ ಆಗಸ್ಟ್ ನಲ್ಲಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಈ ಜೋಡಿ ಸಾಮಾಜಿಕ ಜಾಲತಾಣಕ್ಕೆ ಹೇಳಿಕೊಂಡಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ