ನವದೆಹಲಿ:
ಪ್ರಸ್ತುತ ಪ್ರಧಾನಿ ಕಚೇರಿಯಲ್ಲಿ ಪ್ರಧಾನ ಮಂತ್ರಿ ಕಚೇರಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ವಿವೇಕ್ ಕುಮಾರ್ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ಶುಕ್ರವಾರ ನೇಮಕಮಾಡಲಾಗಿದೆ.
ವಿವೇಕ್ ಕುಮಾರ್ ಅವರು 2004ನೇ ಬ್ಯಾಚ್ನ ಐಎಫ್ಎಸ್ ಅಧಿಕಾರಿ. ಇವರು ಈ ಹಿಂದೆ ಪ್ರಧಾನಿ ಕಚೇರಿಯ ನಿರ್ದೇಶಕರಾಗಿದ್ದರು. 2014ರಲ್ಲಿ ಪ್ರಧಾನಿ ಕಚೇರಿಯ ಉಪ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಇವರು ಮುಂಬೈನ ಐಐಟಿ ಕಾಲೇಜಿನಲ್ಲಿ ಕೆಮಿಕಲ್ ಇಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ. ಆಸ್ಟ್ರೇಲಿಯಾ, ರಷ್ಯಾಗಳಲ್ಲಿ ರಾಯಭಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ವಿವೇಕ್ ಕುಮಾರ್ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ನೇಮಕ ಮಾಡಲು ಸಚಿವ ಸಂಪುಟ ನೇಮಕಾತಿ ಸಮಿತಿ (ಎಸಿಸಿ) ಅನುಮೋದನೆ ನೀಡಿದೆ. ಅಧಿಕಾರ ವಹಿಸಿಕೊಂಡ ದಿನದಿಂದ ಮುಂದಿನ ಆದೇಶದವರೆಗೆ ಅಥವಾ ಅವಧಿ ಮುಗಿಯುವವರೆಗೆ ಅವರು ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.