ಗಣೇಶ ಪ್ರತಿಷ್ಠಾಪನೆ ಮಾಡ್ತೀವಿ ; ತಾಕತ್ತಿದ್ದರೆ ಬಂಧಿಸಿ : ಮುತಾಲಿಕ್ ಸವಾಲ್!!

ವಿಜಯಪುರ :

     ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್​ ಹೇಳಿದ್ದಾರೆ.

      ವಿಜಯಪುರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,ಬಾರ್, ಮಾಲ್​ಗಳನ್ನು ತೆರೆಯಲು ಅವಕಾಶ ಕೊಡ್ತಾರೆ, ಗಣಪತಿಗೆ ಏಕೆ ಅವಕಾಶ ಇಲ್ಲ? ನಾವು ಒಂದೇ ಒಂದು ಕರೊನಾ ವೈರಸ್ ಹರಡದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು ಗಣೇಶ ಚತುರ್ಥಿ ಆಚರಿಸುತ್ತೇವೆ. ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ ಎಂದು ಸವಾಲ್ ಹಾಕಿದರು.

      ಕೊರೊನಾ ನಿರ್ವಹಣೆ ವಿಚಾರದಲ್ಲಿ ನೂರಕ್ಕೆ ನೂರರಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಜನರ ಸಾವು-ನೋವಿನಲ್ಲೂ ದುಡ್ಡು ಹೊಡೆಯಲಾಗುತ್ತಿದೆ. ವಿರೋಧ ಪಕ್ಷದವರು ಆರೋಪಿಸಿದ್ದು ಸರಿಯಾಗಿದೆ, ಸರ್ಕಾರ ಅವರಿಗೆ ಸಮರ್ಪಕ ದಾಖಲೆ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.

      ಕರೊನಾ ಸೋಂಕು ರಾಜ್ಯದಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಹೆಚ್ಚು ಜನರು ಸೇರಿ ಯಾವುದೇ ಹಬ್ಬ ಆಚರಣೆ ಮಾಡುವುದು ಸರಿಯಲ್ಲ. ಅದ್ದೂರಿ ಗಣೇಶೋತ್ಸವ ಆಚರಣೆ ಬೇಡ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಕಳೆದ ತಿಂಗಳು ಹೇಳಿದ್ದರು. ಇದರ ಬೆನ್ನಲ್ಲೇ ಹಲವೆಡೆ ಅದ್ದೂರಿ ಗಣೇಶೋತ್ಸವಕ್ಕೆ ಬ್ರೇಕ್​ ಹಾಕಲಾಗಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಿ ಎಂದು ಕೆಲವೆಡೆ ಮನವಿ ಕೇಳಿಬಂದಿದೆ.

      ಆದರೆ, ಸರ್ಕಾರದ ಆದೇಶಕ್ಕೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್​ ಸೆಡ್ಡು ಹೊಡೆದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap