ಹಿರಿಯ ಕಾಂಗ್ರೆಸ್​ ಮುಖಂಡ, ಕೇಂದ್ರದ ಮಾಜಿ ಸಚಿವ ಎಸ್​. ಜೈಪಾಲ್​ ರೆಡ್ಡಿ ನಿಧನ

ಹೈದರಾಬಾದ್​:  

   ತೆಲಂಗಾಣ ಪ್ರಾಂತ್ಯದ ಹಿರಿಯ ಕಾಂಗ್ರೆಸ್​ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಎಸ್​. ಜೈಪಾಲ್​ ರೆಡ್ಡಿ (77) ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ.

   ಇತ್ತೀಚೆಗೆ ನ್ಯುಮೋನಿಯಾಕ್ಕೆ ತುತ್ತಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ನಸುಕಿನ ಜಾವ 1.28ರಲ್ಲಿ ಮೃತಪಟ್ಟರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಇವರ ಅಂತ್ಯಕ್ರಿಯೆ ಹೈದರಾಬಾದ್​ನಲ್ಲಿ ಸೋಮವಾರ ನೆರವೇರಲಿರುವುದಾಗಿ ಹೇಳಿವೆ.

   ಅವಿಭಜಿತ ಆಂಧ್ರಪ್ರದೇಶದಲ್ಲಿ ನಾಲ್ಕು ಬಾರಿ ಶಾಸಕರಾಗಿ, ಐದು ಅವಧಿಗೆ ಲೋಕಸಭಾ ಸದಸ್ಯರಾಗಿ ಮತ್ತು ಎರಡು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಕೇಂದ್ರದಲ್ಲಿ ಕಾಂಗ್ರೆಸ್​ ಆಡಳಿತವಿದ್ದಾಗ ಕಾನೂನು ಸೇರಿ ಹಲವು ಪ್ರಮುಖ ಖಾತೆಗಳ ಸಚಿವರಾಗಿಯೂ ಕೆಲಸ ಮಾಡಿದ್ದರು.

    ಜೈಪಾಲ್​ ರೆಡ್ಡಿಯವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ  ಎಚ್ಡಿ. ದೇವೇಗೌಡ. ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಜೈಪಾಲ್ ರೆಡ್ಡಿ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಬಹಳ ನೋವಾಗಿದೆ  ನಾನು ಪ್ರಧಾನ ಮಂತ್ರಿ ಆಗಿದ್ದಾಗ ಸಂಪುಟದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೆವು. 

   ಜೈಪಾಲ್ ರೆಡ್ಡಿ ಅವರು ಒಬ್ಬ ಸರಳ ಸಜ್ಜನಿಕೆಯ ವ್ಯಕ್ತಿ, ಅವರ ಅಗಲಿಕೆಯಿಂದ ನಾವೆಲ್ಲ ಒಬ್ಬ  ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೀವಿ  ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು  ಅವರ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ತುಂಬಲಿ ಎಂದು ಸಂತಾಪ  ವ್ಯಕ್ತಪಡಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap