ದೆಹಲಿ:

ರಫೆಲ್ ಯುದ್ಧ ವಿಮಾನ ಖರೀದಿ ಪ್ರಕರಣದಲ್ಲಿ ಪ್ರಕರಣಕ್ಕೆ ಸಂಬಂಧಿಸಿ ಡಿ.14ರಂದು ನೀಡಿದ್ದ ತೀರ್ಪು ಪರಿಶೀಲನೆಗೆ ಸುಪ್ರೀಂ ಕೋರ್ಟ್ ಇಂದು ಸಮ್ಮತಿ ನೀಡಿದೆ.
“ಭಾರತ ಸರಕಾರ ಫ್ರಾನ್ಸ್ನಿಂದ 36 ರಫೇಲ್ ಜೆಟ್ ಗಳನ್ನು ಖರೀದಿಸಿದ ನಿರ್ಧಾರ ಪ್ರಕ್ರಿಯೆಯನ್ನು ಶಂಕಿಸಲಾಗದು’ ಎಂದು ತೀರ್ಪು ನೀಡುವ ಮೂಲಕ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ, ಅರುಣ್ ಶೌರಿ ಸೇರಿದಂತೆ ಹಲವಾರು ಮಂದಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಜಾ ಮಾಡಿತ್ತು.
ಆ ತೀರ್ಪು ಮರುಪರಿಶೀಲಿಸುವಂತೆ ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಈ ಸಂಬಂಧ ಶೀಘ್ರ ವಿಚಾರಣೆ ನಡೆಸುವಂತೆ ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ಪರಿಗಣಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ತೀರ್ಪು ಪರಿಶೀಲನೆಗೆ ಒಪ್ಪಿಕೊಂಡಿದೆ.
ಎಲ್ಲ ಅರ್ಜಿಗಳ ವಿಚಾರಣೆ ನಡೆಸಲು ವಿವಿಧ ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠ ರಚಿಸುವ ಅವಶ್ಯಕತೆಯಿದೆ. ಈ ಕುರಿತು ಪರಿಶೀಲಿಸಬೇಕಿದೆ. ಎಂದು ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
