ವೆಲ್ಲೋರ್:
ತಮಿಳುನಾಡಿನ ವೆಲ್ಲೂರು ಕ್ಷೇತ್ರದ ಲೋಕಸಭಾ ಚುನಾವಣೆಯನ್ನು ಮುಂದೂಡಲು ನಿರ್ಧರಿಸಿದ್ದ ಚುನಾವಣಾ ಆಯೋಗ ಮತ್ತೆ ತನ್ನ ನಿರ್ಧಾರವನ್ನು ಆಯೋಗ ಕೈಬಿಟ್ಟಿದೆ.
ಡಿಎಂಕೆ ಅಭ್ಯರ್ಥಿಯ ಗೋದಾಮಿನಲ್ಲಿ ಅಪಾರ ಪ್ರಮಾಣದಲ್ಲಿ ಅಕ್ರಮ ಹಣ ಸಿಕ್ಕ ಹಿನ್ನೆಲೆಯಲ್ಲಿ ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದು ಮಾಡಲು ಚುನಾವಣಾ ಆಯೋಗವು ಸೋಮವಾರ ನಿರ್ಧರಿಸಿತ್ತು. ಆದರೆ, ಇದೀಗ ವೆಲ್ಲೋರ್ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಮುಂದೂಡಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಮತದಾರರನ್ನು ಓಲೈಸಲು ಅಪಾರ ಪ್ರಮಾಣದಲ್ಲಿ ಹಣ ಹಂಚಲಾಗುತ್ತಿದೆ ಎಂಬ ಆರೋಪದಲ್ಲಿ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ಸ್ಪಷ್ಟನೆ ನೀಡಿದೆ.
ವೆಲ್ಲೋರ್ನಲ್ಲಿ ಏ.18ರಂದು ನಿಗದಿಯಂತೆ ಚುನಾವಣೆ ನಡೆಯಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಚುನಾವಣೆ ಮುಂದೂಡಿಕೆ ಕುರಿತು ಮತದಾರರು ಗೊಂದಲಕ್ಕೆ ಒಳಗಾಗದೆ, ಅಂದು ಮತದಾನ ಮಾಡಬೇಕು ಎಂದು ಆಯೋಗದ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ