ನಾಪತ್ತೆಯಾಗಿದ್ದ AN-32 ವಿಮಾನದ ಅವಶೇಷಗಳು ಪತ್ತೆ!!!

ದೆಹಲಿ:

      ಕಳೆದ ವಾರ ನಾಪತ್ತೆಯಾಗಿದ್ದ ವಾಯುಪಡೆಯ ವಿಮಾನದ ಅವಶೇಷಗಳು ಅರುಣಾಚಲ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ವಾಯುಪಡೆ ದೃಢಪಡಿಸಿದೆ. 

      ಜೂನ್ 3ರಂದು ಅರುಣಾಚಲ ಪ್ರದೇಶದ ಜೊರ್ಹಾಟ್ ವಾಯುನೆಲೆಯಿಂದ ಹೊರಟಿದ್ದ ಎಎನ್‌-32 ವಿಮಾನ ಅರ್ಧ ಗಂಟೆಯಲ್ಲಿ ಸಂಪರ್ಕ ಕಡಿದುಕೊಂಡು ನಾಪತ್ತೆಯಾಗಿತ್ತು. ಅದರ ಅವಶೇಷಗಳು ಈಗ ಉತ್ತರ ಲಿಪೋದ ಸುಮಾರು 12,000 ಅಡಿ ಎತ್ತರದ ಪರ್ವತ ಪ್ರದೇಶದಲ್ಲಿ ಪತ್ತೆಯಾಗಿವೆ ಎಂದು ಶೋಧ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಂಐ-17 ಹೆಲಿಕಾಪ್ಟರ್ ಸಿಬ್ಬಂದಿ ತಿಳಿಸಿದ್ದಾರೆ. 

      ಇದರಲ್ಲಿ 8 ಸಿಬ್ಬಂದಿ ಮತ್ತು 5 ಮಂದಿ ಪ್ರಯಾಣಿಕರಿದ್ದರು. 13 ಸಿಬ್ಬಂದಿಯ ಕುರಿತು ಅದರಲ್ಲಿ ಪ್ರಸ್ತಾಪಿಸಿಲ್ಲ. ಕಣ್ಮರೆಯಾದ ವಿಮಾನದಲ್ಲಿದ್ದ ಸಿಬ್ಬಂದಿಯ ಕುಟುಂಬದವರು ಅಸ್ಸಾಂನಲ್ಲಿ ಬೀಡುಬಿಟ್ಟಿದ್ದು, ಅವರ ಕುರಿತು ಯಾವುದಾದರೂ ಸುದ್ದಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap