ದೆಹಲಿ:
ಕಳೆದ ವಾರ ನಾಪತ್ತೆಯಾಗಿದ್ದ ವಾಯುಪಡೆಯ ವಿಮಾನದ ಅವಶೇಷಗಳು ಅರುಣಾಚಲ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ವಾಯುಪಡೆ ದೃಢಪಡಿಸಿದೆ.
The wreckage of the missing #An32 was spotted today 16 Kms North of Lipo, North East of Tato at an approximate elevation of 12000 ft by the #IAF Mi-17 Helicopter undertaking search in the expanded search zone..
— Indian Air Force (@IAF_MCC) June 11, 2019
ಜೂನ್ 3ರಂದು ಅರುಣಾಚಲ ಪ್ರದೇಶದ ಜೊರ್ಹಾಟ್ ವಾಯುನೆಲೆಯಿಂದ ಹೊರಟಿದ್ದ ಎಎನ್-32 ವಿಮಾನ ಅರ್ಧ ಗಂಟೆಯಲ್ಲಿ ಸಂಪರ್ಕ ಕಡಿದುಕೊಂಡು ನಾಪತ್ತೆಯಾಗಿತ್ತು. ಅದರ ಅವಶೇಷಗಳು ಈಗ ಉತ್ತರ ಲಿಪೋದ ಸುಮಾರು 12,000 ಅಡಿ ಎತ್ತರದ ಪರ್ವತ ಪ್ರದೇಶದಲ್ಲಿ ಪತ್ತೆಯಾಗಿವೆ ಎಂದು ಶೋಧ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಂಐ-17 ಹೆಲಿಕಾಪ್ಟರ್ ಸಿಬ್ಬಂದಿ ತಿಳಿಸಿದ್ದಾರೆ.
ಇದರಲ್ಲಿ 8 ಸಿಬ್ಬಂದಿ ಮತ್ತು 5 ಮಂದಿ ಪ್ರಯಾಣಿಕರಿದ್ದರು. 13 ಸಿಬ್ಬಂದಿಯ ಕುರಿತು ಅದರಲ್ಲಿ ಪ್ರಸ್ತಾಪಿಸಿಲ್ಲ. ಕಣ್ಮರೆಯಾದ ವಿಮಾನದಲ್ಲಿದ್ದ ಸಿಬ್ಬಂದಿಯ ಕುಟುಂಬದವರು ಅಸ್ಸಾಂನಲ್ಲಿ ಬೀಡುಬಿಟ್ಟಿದ್ದು, ಅವರ ಕುರಿತು ಯಾವುದಾದರೂ ಸುದ್ದಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ