ನವದೆಹಲಿ:
ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ನಿನ್ನೆ ಒಂದೇ ದಿನ 9 ಸಾವಿರಕ್ಕೂ ಅಧಿಕ ಪ್ರಕರಣಗಳು ಗೋಚರಿಸಿವೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 9,304 ಸೋಂಕಿತರು ಪತ್ತೆಯಾಗಿದ್ದು, 260 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 2,16,919ಕ್ಕೆ ಹಾಗೂ ಮೃತರ ಸಂಖ್ಯೆ 6,075ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಅರ್ಧದಷ್ಟು ಅಂದರೆ 1,04,107 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 1,06,737 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಮೇ 30ರಿಂದ 8 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಕಂಡು ಬರುತ್ತಿದ್ದವು. ನಾಲ್ಕೇ ದಿನಕ್ಕೆ ದಿನವೊಂದರಲ್ಲಿ 9 ಸಾವಿರಕ್ಕೂ ಅಧಿಕ ಪ್ರಕರಣಗಳು ಗೋಚರಿಸಲು ಆರಂಭವಾಗಿದೆ. ಅಲ್ಲದೆ ದೇಶದಲ್ಲಿ ಕೊರೋನಾದಿಂದ ಸತ್ತವರ ಸಂಖ್ಯೆ 6 ಸಾವಿರವನ್ನೂ ದಾಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
