ನವದೆಹಲಿ :
ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧವನ್ನು ಮೇ 31ರವರೆಗೆ ವಿಸ್ತರಣೆ ಮಾಡಿರುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಈ ನಿರ್ಬಂಧ ಅಂತರಾಷ್ಟ್ರೀಯ ಸರಕು ಸಾಗಣೆ ವಿಮಾನ ಸಂಚಾರಕ್ಕೆ ಅನ್ವಯಿಸುವುದಿಲ್ಲ ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೂ ರದ್ದು ನಿರ್ಬಂಧ ಅನ್ವಯಿಸುವುದಿಲ್ಲ ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.
ವಂದೇ ಭಾರತ್ ಯೋಜನೆಯಲ್ಲಿ ಸಂಚರಿಸುವ ವಿಮಾನಗಳಿಗೆ ಯಾವುದೇ ರೀತಿಯ ನಿರ್ಬಂಧಗಳಿಲ್ಲ. ಈ ಆದೇಶ ಸರಕು ವಿಮಾನ ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಕೋವಿಡ್ ಸೋಂಕಿನ ನಿಟ್ಟಿನಲ್ಲಿ ಭಾರತದಲ್ಲಿ 2020ರ ಮಾರ್ಚ್ 23ರಿಂದ ನಿಗದಿತ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನಯಾನವನ್ನು ರದ್ದುಗೊಳಿಸಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
