ಬೆಂಗಳೂರು,
ಕೌಟುಂಬಿಕ ಕಲಹ ಹಾಗೂ ಅನಾರೋಗ್ಯದಿಂದ ನೊಂದ ಮಹಿಳೆಯೊಬ್ಬರು ನೇಣಿಗೆ ಶರಣಾಗಿರುವ ದುರ್ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಚೇನಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು ರಾಚೇನಹಳ್ಳಿಯ ರಾಜೇಶ್ವರಿ (35)ಎಂದು ಗುರುತಿಸಲಾಗಿದೆ.ಕಾಫಿ ಡೇ ಕಂಪನಿಯಲ್ಲಿ ಹೌಸ್ ಕಿಂಪಿಂಗ್ ಕೆಲಸ ಮಾಡುತ್ತಿದ್ದ ರಾಜೇಶ್ವರಿ 14 ವರ್ಷಗಳ ಹಿಂದೆ ಸೋದರ ಮಾವನ ಮಗ ನಾಣಯ್ಯ ಅವರನ್ನು ವಿವಾಹವಾಗಿದ್ದರು. ದಂಪತಿಗೆ 14 ವರ್ಷದ ಮಗಳಿದ್ದಾಳೆ.
ಕೌಟುಂಬಿಕ ಕಲಹದ ಜೊತೆ ಮೂತ್ರಪಿಂಡ ತೊಂದರೆಯಿಂದ ಬಳಲುತ್ತಿದ್ದ ರಾಜೇಶ್ವರಿ ಅದೇ ನೋವಿನಲ್ಲಿ ರಾತ್ರಿ ಪತಿ ಮಗಳು ಹೊರ ಹೋಗಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿರುವ ಸಂಪಿಗೆ ಹಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
