ಮಾಸ್ಕೋ :
ಬಸ್ ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ 15 ಜನರು ಸಾವನ್ನಪ್ಪಿರುವ ಘಟನೆ ಮಧ್ಯ ನೇಪಾಳದ ಸಿಂದುಪಾಲ್ ಚೌಕ್ ಜಿಲ್ಲೆಯ ಸುಂಕೋಶಿ ನದಿಯಲ್ಲಿ ನಡೆದಿದೆ.
ರಾಜಧಾನಿ ಕಠ್ಮಂಡುವಿಗೆ ತೆರಳುತ್ತಿದ್ದ ಬಸ್ ಸುಂಕೋಶಿ ನದಿಯಲ್ಲಿ ಉರುಳಿ ಬಿದ್ದಿದೆ. ಪರಿಣಾಮ 15 ಜನರು ಸಾವನ್ನಪ್ಪಿ, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸದಬಾಹರ್ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದುರ್ಘಟನೆಗೆ ಈ ವರೆಗೂ ಕಾರಣಗಳು ತಿಳಿದುಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
