ಮಂಡ್ಯ:
ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸೇರಿ 5 ಜನ ಸಾವಿಗೀಡಾದ ಘಟನೆ ನಾಗಮಂಗಲ ತಾಲೂಕಿನ ಸಂಕನಹಳ್ಳಿ ಬಳಿ ನಡೆದಿದೆ.
ಪ್ರಯಾಣಿಕರ ಆಟೋಗೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಆಟೋ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಶವಗಳ ಅಂಗಾಂಗಗಳು ಚಿಲ್ಲಾಪಿಲ್ಲಿಯಾಗಿ ಬಿದ್ದಿವೆ. ಘಟನೆಯಲ್ಲಿ ಅರಸಮ್ಮ, ಬೋರಲಿಂಗ ಸೇರಿದಂತೆ 5 ಜನ ಸಾವಿಗೀಡಾಗಿದ್ದು, ಉಳಿದ ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ನಾಗಮಂಗಲ-ಕೆ.ಆರ್.ಪೇಟೆ ರಸ್ತೆಯಲ್ಲಿ ಘಟನೆ ನಡೆದಿದೆ. ಈ ಬಗ್ಗೆ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.