ಬೆಂಗಳೂರು:
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನನ್ನ ವಿರುದ್ಧದ ಬಿಜೆಪಿ ಕೇಂದ್ರ ನಾಯಕರಿಗೆ 1800 ಕೋಟಿ ರುಪಾಯಿ ಕಪ್ಪ ನೀಡಿದ ಆರೋಪ ಸಾಬೀತುಪಡಿಸಿದರೆ ರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುಲತ್ತೇನೆ ಎಂದಿದ್ದಾರೆ.. ಇಲ್ಲದಿದ್ದರೆ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಸವಾಲು ಹಾಕಿದ್ದಾರೆ.
ಇಂದು ನಗರದಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಜಂಟಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಬಿ.ಎಸ್ ಯಡಿಯೂರಪ್ಪ ಅವರ 1800 ಕೋಟಿ ರು. ಡೈರಿ ವಿಚಾರ ಪ್ರಸ್ತಾಪಿಸಿದ್ದರು. ಇದ್ದಕೆ ಬಿಎಸ್ ವೈ, 1800 ಕೋಟಿ ರು.ಡೈರಿ ನಕಲಿ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೇ ಹೇಳಿದ್ದಾರೆ. ಆದರೆ ಮತ್ತೆ ಇಂಥ ಹೇಳಿಕೆಗಳನ್ನು ನೀಡುವ ಮೂಲಕ ಕಳಂಕ ರಹಿತ ನಾಯಕಾರದ ಅರುಣ್ ಜೇಟ್ಲಿ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಮತ್ತು ನನಗೆ ಅವಮಾನ ಮಾಡುತ್ತಿದ್ದಾರೆ. ಇಂಥ ಅವಹೇಳನ ಸಿರಿಇಲ್ಲ ಎಂದಿದ್ದಾರೆ.
ರಾಹುಲ್ ಗಾಂಧಿ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ ರಾಷ್ಟ್ರದ ಮುಂದೆ ನಗೆಪಾಟಲಿಗೆ ಈಡಾಗಿದ್ದಾರೆ. ರಾಹುಲ್ ಗಾಂಧಿ ಒಂದು ಜವಾಬ್ದಾರಿಯುತ ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ನೀಡುವ ಇಂತಹ ಅಸಂಬದ್ಧ ಹೇಳಿಕೆಗಳು ಅವರ ಘನತೆಗೆ ತಕ್ಕದ್ದಲ್ಲ. ರಾಹುಲ್ ಗಾಂಧಿ ಅವರು, ತಮ್ಮ ಹೇಳಿಕೆಗೆ ಬದ್ಧರಾಗಿ, ನಮ್ಮ ಮತ್ತು ನಮ್ಮ ನಾಯಕರ ಮೇಲೆ ಮಾಡಿರುವ ಆರೋಪಗಳನ್ನು ಸಾಬೀತುಪಡಿಸಬೇಕು. ಇಲ್ಲದಿದ್ದರೆ ಅವರ ಹುದ್ದೆಗೆ ರಾಜೀನಾಮೆ ನೀಡಬೇಕು. ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ಈ ಸವಾಲನ್ನು ಅವರು ಸ್ವೀಕರಿಸಬೇಕು. ಸವಾಲು ಸ್ವೀಕರಿಸಿ ಆಪಾದನೆ ಸಾಬೀತುಪಡಿಸಿದ್ರೆ ನಾನು ನನ್ನ ರಾಜಕೀಯ ಜೀವನದಿಂದಲೇ ನಿವೃತ್ತಿ ಪಡೆಯುತ್ತೇನೆ ಅಂತಾ ಯಡಿಯೂರಪ್ಪ ಸವಾಲ್ ಹಾಕಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ