ನವದೆಹಲಿ:
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಗೋವಾದಲ್ಲಿ ಸರ್ಕಾರ ರಚನೆಗೆ ತಮಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಗೋವಾ ರಾಜ್ಯಪಾಲರಿಗೆ ಪತ್ರ ಬರೆದಿದೆ.

ಕಾಂಗ್ರೆಸ್ ಗೋವಾದಲ್ಲಿ ಸರ್ಕಾರ ರಚಿಸಲು ಅವಕಾಶ ನೀಡಿ ಎಂದು ರಾಜ್ಯಪಾಲೆ ಮೃದುಲಾ ಸಿನ್ಹಾ ಅವರಿಗೆ ಪತ್ರ ಬರೆದಿದೆ. ಪ್ರತಿಪಕ್ಷದ ನಾಯಕ ಚಂದ್ರಕಾಂತ್ ಕಾವ್ಲೇಕರ್ ಅವರು ಬರೆದಿರುವ ಪತ್ರದಲ್ಲಿ, ‘ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಬಹುಮತವಿಲ್ಲ. ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ಹಾಗೂ ರಾಜ್ಯ ವಿಧಾನ ಸಭೆಯ ಅತಿ ದೊಡ್ಡ ಕಾಂಗ್ರೆಸ್ ಪಕ್ಷವನ್ನು ಸರ್ಕಾರ ರಚಿಸಲು ಅವಕಾಶ ನೀಡಿ’ ಎಂದು ಬರೆದಿದ್ದಾರೆ.
ಜೊತೆಗೆ ಬಿಜೆಪಿ ಸ್ಥಾನದ ಸಂಖ್ಯೆಯು ಕಡಿಮೆಯಾಗುತ್ತಿದೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಅಧಿಕಾರ ಮುಂದುವರಿಸಲು ಅವಕಾಶ ಕೊಡಬಾರದು. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವನ್ನು ವಜಾ ಮಾಡಿ’ ಎಂದು ಕಾವ್ಲೇಕರ್ ಬರೆದುಕೊಂಡಿದ್ದಾರೆ
