ನವದೆಹಲಿ :
ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ (59) ಅನಾರೋಗ್ಯದಿಂದ ನಿಧನರಾದ ಹಿನ್ನೆಲೆ ಅವರು ಹೊಂದಿದ್ದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಹೊಣೆಯನ್ನು ರಾಜ್ಯದ ಕೇಂದ್ರ ಸಚಿವರಾದ ಸದಾನಂದಗೌಡರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.ಸದ್ಯ ಸದಾನಂದ ಗೌಡ ಅವರ ಬಳಿ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆ ಇದೆ.
ಅನಂತ್ ಕುಮಾರ್ ನಿರ್ವಹಿಸುತ್ತಿದ್ದ ಸಂಸದೀಯ ವ್ಯವಹಾರಗಳ ಖಾತೆಯನ್ನು ಹೆಚ್ಚುವರಿಯಾಗಿ ನರೇಂದ್ರ ಸಿಂಗ್ ತೋಮರ್ ಅವರಿಗೆ ನೀಡಲಾಗಿದೆ. ಸದ್ಯ ನರೇಂದ್ರ ಸಿಂಗ್ ತೋಮರ್ ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಗಣಿ ಖಾತೆಯನ್ನು ಹೊಂದಿದ್ದಾರೆ.
ಕೇಂದ್ರ ಸಚಿವ ಅನಂತ್ ಕುಮಾರ್ ಅವರು ರಸಗೊಬ್ಬರ ಖಾತೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ವೆಂಕಯ್ಯ ನಾಯ್ಡು ಉಪ ರಾಷ್ಟ್ರಪತಿಯಾಗಿ ಆಯ್ಕೆಯಾದ ಬಳಿಕ ಸಂಸದೀಯ ವ್ಯವಹಾರಗಳ ಖಾತೆಯ ಜವಾಬ್ದಾರಿಯನ್ನು ಅನಂತ್ ಕುಮಾರ್ ಅವರಿಗೆ ನೀಡಲಾಗಿತ್ತು.
ಮೋದಿಯವರ ಈ ಶಿಫಾರಸನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
