ಬೊಳ್ಳೊರು(ಕಡಬ) :
ಗೊಡ್ಸ್ ಟೆಂಪೋ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಅಂಭವಿಸಿದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನೆಕ್ಕಿಲಾಡಿ ಗ್ರಾಮದ ಬೊಳ್ಳೊರು ದೇವಸ್ಥಾನದ ಬಳಿ ಇಂದು ಸಂಭವಿಸಿದೆ.
ಮೃತ ಸವಾರನನ್ನು ರಾಜಸ್ತಾನ ಮೂಲದ ಮೇಘರಾಜ್ ಎಂದು ಗುರುತಿಸಲಾಗಿದೆ.
ಬೊಳ್ಳೊರು ದೇವಸ್ಥಾನದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ 407 ಟೆಂಪೋ ಹಾಗೂ ದ್ವಿಚಕ್ರ ವಾಹನದ ನಡುವೆ ಬೊಳ್ಳೊರು ದೇವಸ್ಥಾನದ ಮುಂದಿನ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ