ಬೆಂಗಳೂರು:
ಇಂದಿನಿಂದ 3 ದಿನಗಳವರೆಗೆ ಕಾರ್ಮಿಕರು ತಮ್ಮ ಊರುಗಳಿಗೆ ಹೋಗಲು ಉಚಿತ ಪ್ರಯಾಣದ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದ್ದಾರೆ.ಲಾಕ್‌ಡೌನ್‌ನಿಂದಾಗಿ ಅತಂತ್ರ ಸ್ಥಿತಿಯಲ್ಲಿರುವ ಪ್ರಯಾಣಿಕರು ತಮ್ಮ ಊರುಗಳಿಗೆ ತಲುಪಲು ಅವಕಾಶ ನೀಡಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿತ್ತು.
ಈ ಆದೇಶದನ್ವಯ ರಾಜ್ಯದಲ್ಲಿಯೂ ಹೊರಜಿಲ್ಲೆಗಳಿಗೆ ಪ್ರಯಾಣಿಕರು ತೆರಳಲು ನಿಯಮಿತ ಬಸ್ಸುಗಳಿಗೆ ಅವಕಾಶ ನೀಡಲಾಗಿತ್ತು. ದುಬಾರಿ ಟಿಕೆಟ್ ದರ ನೀಡಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಕಾರ್ಮಿಕರ ಬಳಿ ಹಣ ಇಲ್ಲದೆ, ಕೆಲ ಪ್ರಯಾಣಿಕರು ಮೆಜೆಸ್ಟಿಕ್‌ನಲ್ಲಿಯೇ ಕಾಲ ಕಳೆಯುವಂತಾಗಿತ್ತು. ಇದು ಮಾಧ್ಯಮದಲ್ಲಿಯೂ ಸುದ್ದಿಯಾಗಿತ್ತು.
ಇದನ್ನ ಗಮನಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಉಳಿದುಕೊಂಡಿದ್ದ ಕಾರ್ಮಿಕರು ಎಲ್ಲಾ ಊರುಗಳಿಗೂ ತೆರಳಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ