ನವದೆಹಲಿ :
ಮುಸುಕುಧಾರಿ ಗೂಂಡಾಗಳ ದೊಡ್ಡ ಗುಂಪೊಂದು ನಿನ್ನೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ(ಜೆಎನ್‌ಯು) ಆವರಣದೊಳಗೆ ಪ್ರವೇಶಿಸಿ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಇತರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದೆ. ಸದಾ ಪ್ರತಿಭಟನೆ ಹಾಗೂ ಹೋರಾಟದಿಂದ ಸುದ್ದಿಯಲ್ಲಿರುವ ದೆಹಲಿಯ ಜೆಎನ್‌ಯು ವಿಶ್ವವಿದ್ಯಾಲಯದಲ್ಲಿ ಈ ರೀತಿಯ ಹಿಂಸಾಚಾರ ನಡೆದಿದ್ದು ಘಟನೆಯ ವಿರುದ್ಧ ಸಾಕಷ್ಟು ಅಕ್ರೋಶ ವ್ಯಕ್ತವಾಗಿದೆ.
ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಆಯಿಷೆ ಘೋಷ್ ಅವರ ಮೇಲೂ ಹಲ್ಲೆ ನಡೆದಿದ್ದು, ಘಟನೆಯಲ್ಲಿ ಆಕೆ ಗಾಯಗೊಂಡಿದ್ದಾಳೆ. ವಿಶ್ವವಿದ್ಯಾಲಯದ ಆವರಣದ ಒಳಗೆ ಪೊಲೀಸರ ಪ್ರವೇಶ ನಿಷೇಧಿಸಿರುವ ಕಾರಣ ಘಟನಾ ಸ್ಥಳಕ್ಕೆ ತೆರಳಿ ರಕ್ಷಿಸಲು ಪೊಲೀಸರಿಗೆ ಸಾದ್ಯವಾಗಲಿಲ್ಲ ಎನ್ನಲಾಗಿದೆ.
ಘಟನೆಯ ಬಳಿಕ ಎಡಪಂಥಿ ಹಾಗೂ ಬಲಪಂಥಿಯ ಪಕ್ಷಗಳು ಪರಸ್ಪರ ಆರೋಪ, ಪ್ರತ್ಯಾರೋಪಗಳನ್ನು ಮಾಡುವುದು ಕಂಡುಬಂದಿದೆ. 34 ಗಾಯಗೊಂಡವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯ ಬಳಿಕ ಡಿಸ್ಚಾರ್ಜ್ ಮಾಡಲಾಗಿದೆ. ದೆಹಲಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ. ಸಧ್ಯಕ್ಕೆ ಪೋಲಿಸ್ ಪಡೆಯ ಕಾವಲು ನಿಯೋಜಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ