ಜನವರಿ 31, ಫೆಬ್ರವರಿ 1ರಂದು ಬ್ಯಾಂಕ್ ಮುಷ್ಕರ

ನವದೆಹಲಿ:

    ಬ್ಯಾಂಕ್ ಗ್ರಾಹಕರೇ ಗಮನಿಸಿ.. ಇದೇ ತಿಂಗಳು ಜನವರಿ ಜನವರಿ 31, ಫೆಬ್ರವರಿ 1ರಂದು ಎರಡು ದಿನಗಳ ಕಾಲ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಲಾಗಿದೆ.

    ಬ್ಯಾಂಕ್ ಸಂಘಟನೆಗಳ ಒಕ್ಕೂಟ ವೇದಿಕೆ (UFBU) ಇದೇ ತಿಂಗಳ ಕೊನೆಯಲ್ಲಿ ಮತ್ತು ಫೆಬ್ರವರಿ ಆರಂಭದಲ್ಲಿ ಎರಡು ದಿನಗಳ ಕಾಲ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ. ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದ್ದು ಅಂದು ಕೂಡ ಬ್ಯಾಂಕ್ ಮುಷ್ಕರವಿರಲಿದೆ. ವೇತನ ಪರಿಷ್ಕರಣೆ ಕುರಿತು ಭಾರತೀಯ ಬ್ಯಾಂಕುಗಳ ಸಂಘ(ಐಬಿಎ)ಯೊಂದಿಗೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಬ್ಯಾಂಕ್ ಒಕ್ಕೂಟಗಳು ಕರೆ ನೀಡಿವೆ.

    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸೇರಿದಂತೆ ಅನೇಕ ಸಾರ್ವಜನಿಕ ಬ್ಯಾಂಕುಗಳು ಈಗಾಗಲೇ ಮುಷ್ಕರದ ಬಗ್ಗೆ ಗ್ರಾಹಕರನ್ನು ಎಚ್ಚರಿಸಿದೆ. ಆದರೆ, ಈ ಮುಷ್ಕರ ಖಾಸಗಿ ಬ್ಯಾಂಕುಗಳ ಮೇಲೆ ಪರಿಣಾಮ ಬೀರುವುದಿಲ್ಲ. ಆನ್‌ಲೈನ್ ಬ್ಯಾಂಕಿಂಗ್ ಸಹ ಮುಂದುವರಿಯುತ್ತದೆ.

   2017ರ ನವಂಬರ್ 01ರಿಂದ ಬಗೆಹರಿಯದೇ ಉಳಿದಿರುವ ವೇತನ ಪರಿಷ್ಕರಣೆ ಬೇಡಿಕೆಯನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಒತ್ತಾಯಿಸಿ ಮಾರ್ಚ್ ತಿಂಗಳಲ್ಲೂ ಸಹ ಮೂರು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap