ಬಳ್ಳಾರಿ:
ಜಿಲ್ಲೆಯ ಬಳ್ಳಾರಿ ತಾಲೂಕಿನ ಸಂಜೀವರಾಯನ ಕೋಟೆ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ತಾಯಿ ಮಗಳು ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಮನೆಯಲ್ಲಿ ಇದ್ದ ತಾಯಿ ಪಾರ್ವತಿ, ಮಗಳು ಹುಲಿಗೆಮ್ಮ, ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ಇಬ್ಬರ ದೇಹಗಳು ಹೊತ್ತಿ ಉರಿಯುತ್ತಿವೆ ಎಂಬ ಮಾಹಿತಿ ತಿಳಿದು ಬಂದಿದೆ. . ಸ್ಥಳಕ್ಕೆ ಅಗ್ನಿಶಾಮಕ ದಳದ ಇನ್ಸ್ಪೆಕ್ಟರ್ ಬಸವರಾಜ್ ಮತ್ತು ಸಿಬ್ಬಂದಿ ಹಾಜರಾಗಿ ಅಗ್ನಿ ನಂದಿಸುವ ಕಾರ್ಯ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ