ಸಿಲಿಕಾನ್ ಸಿಟಿಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ಬೆಂಗಳೂರು:

   ರೌಡಿಶೀಟರ್​ನೋರ್ವನನ್ನು ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಗರದ ಸಂಪಿಗೆಹಳ್ಳಿ ಬಳಿ ಸೋಮವಾರ ರಾತ್ರಿ ನಡೆದಿದೆ. ಭರತ್ ಅಲಿಯಾಸ್ ಕೋಗಿಲು ಭರತ್ (28) ಕೊಲೆಯಾದ ರೌಡಿಶೀಟರ್.

  ಸಂಪಿಗೆಹಳ್ಳಿಯ ವಿಜಯ ವೈನ್ಸ್ ಮುಂಭಾಗದಲ್ಲಿ ಭರತ್ ನಿಂತಿದ್ದಾಗ ಬೈಕ್​ನಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳು ಆತನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ‌ಮಾಡಿದ್ದಾರೆ ಎನ್ನಲಾಗಿದೆ.  

    ಕೊಲೆಯಾದ ಭರತ್ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಯಲಹಂಕ, ಸಂಪಿಗೆ ಹಳ್ಳಿ ಸೇರಿದಂತೆ ಇತರೆ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ, ದರೋಡೆ, ಬೆದರಿಕೆಯೊಡ್ಡಿರುವ ಪ್ರಕರಣಗಳು ದಾಖಲಾಗಿವೆ. ಹಳೇ ದ್ವೇಷದ ಹಿನ್ನೆಲೆ ಕೊಲೆ‌ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap