ಬೆಂಗಳೂರು:
ಕನ್ನಡದ ಹಿರಿಯ ಸಾಹಿತಿ ಡಾ ಎಂ ಚಿದಾನಂದ ಮೂರ್ತಿಯವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿ, ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, ಸಂಶೋಧಕ, ಚಿಂತಕ, ಇತಿಹಾಸಕಾರರಾಗಿದ್ದ ಚಿ.ಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ, ಯಾರೂ ತುಂಬಲಾಗದು ಎಂದಿದ್ದಾರೆ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಚಿದಾನಂದ ಮೂರ್ತಿಯವರ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮಕ್ಕೆ ಶಾಂತಿ ದೊರಕಲಿ ಎಂದಿದ್ದಾರೆ. ಹಾಗೆ ಸಂಸದ ಪ್ರತಾಪ್ ಸಿಂಹ, ಸಾಹಿತಿಗಳಾದ ಎಸ್ ಎಲ್ ಭೈರಪ್ಪ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, ಸಂಶೋಧಕ, ಚಿಂತಕ, ಇತಿಹಾಸಕಾರರಾಗಿದ್ದ ಚಿ.ಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ, ಯಾರೂ ತುಂಬಲಾಗದು. ಹಂಪಿಯ ಸ್ಮಾರಕಗಳನ್ನು ಉಳಿಸುವಲ್ಲಿ ಹಾಗೂ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗುವಲ್ಲಿ ಇವರ ಪ್ರಯತ್ನ ಸ್ಮರಣೀಯ. ಅವರಾತ್ಮಕ್ಕೆ ಶಾಂತಿ ದೊರಕಲಿ. #RIPChidanandaMurthi pic.twitter.com/PlNINCGeDI
— B.S. Yediyurappa (@BSYBJP) January 11, 2020
ನಾಡಿನ ಹಿರಿಯ ಸಾಹಿತಿ, ಇತಿಹಾಸಜ್ಞ, ಹೋರಾಟಗಾರ, ವಿಶೇಷವಾಗಿ ಹಂಪೆಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನ ರೀತಿ ತನ್ನ ಜೀವನವನ್ನೇ ಮುಡುಪಾಗಿಟ್ಟ ಶ್ರೀ ಎಂ ಚಿದಾನಂದಮೂರ್ತಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ. pic.twitter.com/D1rViTsAns
— S.Suresh Kumar, Minister – Govt of Karnataka (@nimmasuresh) January 11, 2020
ಹಿರಿಯ ಸಾಹಿತಿ,ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದು:ಖವಾಯಿತು.
ಅವರ ಸಂಶೋಧನೆ ಮತ್ತು ಸಾಹಿತ್ಯದ ಜೊತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ಮೀರಿದ ಸ್ನೇಹ ಶೀಲ ಗುಣವನ್ನೂ
ನಾಡು ಸದಾ ಸ್ಮರಿಸುತ್ತದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/VDFzUwiekx— Siddaramaiah (@siddaramaiah) January 11, 2020
ಹಿರಿಯ ಸಂಶೋಧಕ,ಕನ್ನಡ ಗರುಡ ಡಾ. ಚಿದಾನಂದ ಮೂರ್ತಿ ಅವರ ನಿಧನದಿಂದ ನಾಡು ಅಪರೂಪದ ವಿದ್ವಾಂಸರನ್ನು ಕಳೆದುಕೊಂಡಿದೆ.ಕನ್ನಡ ಶಕ್ತಿ ಕೇಂದ್ರ ಸ್ಥಾಪಿಸಿದ್ದ 'ಚಿಮೂ'ಎಂದೇ ಖ್ಯಾತರಾಗಿದ್ದ ಹಿರಿಯ ಜೀವ ನಾಡುನುಡಿಜಲಕ್ಕಾಗಿ ಅಹರ್ನಿಶಿ ಶ್ರಮಿಸಿದ್ದರು.
ಮೃತರ ಕುಟುಂಬ ಸದಸ್ಯರಿಗೆ,ಅವರ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ pic.twitter.com/NMHadTXwwZ— H D Kumaraswamy (@hd_kumaraswamy) January 11, 2020
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ