ಲಾರಿಗೆ ಬಸ್ ಡಿಕ್ಕಿ: ಮೂವರ ದುರ್ಮರಣ, ಹತ್ತು ಜನರಿಗೆ ಗಾಯ

ಚಿತ್ರದುರ್ಗ:

 ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್​​ ಡಿಕ್ಕಿ ಹೊಡೆದು ಬಸ್​ ಚಾಲಕ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

   ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದ ಪೆಟ್ರೋಲ್ ಬಂಕ್ ಬಳಿ ನಸುಕಿನಲ್ಲಿ ದುರ್ಘಟನೆ ನಡೆದಿದೆ. ಕೆಎಸ್​​ಆರ್​ಟಿಸಿ ಬಸ್​ ಚಾಲಕ ಬಿಜಾಪುರ ಮೂಲದ ಪ್ರವೀಣ್(36), ಬೆಂಗಳೂರಿನ ವಿಜಯ್ ಕುಮಾರ್(37) ಮೃತರು. ಮೃತ ಮಹಿಳೆಯ ಹೆಸರು ಇನ್ನೂ ತಿಳಿದುಬಂದಿಲ್ಲ. 

   ಸರಕು ತುಂಬಿದ್ದ ಲಾರಿಯೊಂದು ಹಿರಿಯೂರಿನಿಂದ ಚಳ್ಳಕೆರೆಗೆ ಪ್ರಯಾಣ ಬೆಳೆಸಿತ್ತು, ಹಿಂದಿನಿಂದ ವೇಗವಾಗಿ ಬಂದ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್​​ ಮುಂಭಾಗ ನುಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಚಳ್ಳಕೆರೆ ಆಸ್ಪತ್ರೆಗೆ ರವಾನಿಸಲಾಗಿದೆ.  ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದೆದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ