ಹುಬ್ಬಳ್ಳಿ:
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಳೆದ ರಾತ್ರಿ ಜನಿಸಿದ ಮೂವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಹುಬ್ಬಳ್ಳಿಯಲ್ಲಿಂದು ಮುಂಜಾನೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಅಮಿತ್ ಶಾ ಉಪಹಾರಕ್ಕೆ ಆಗಮಿಸಿದ್ದರು. ಈ ವೇಳೆ ಅಮಿತ್ ಶಾ ಅವರು ಜೋಶಿ ಮನೆಯಲ್ಲಿ ಮೂವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದರು.
ಹುಬ್ಬಳ್ಳಿ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಶರೀಫಾ ಕಳ್ಳಿಭಾವಿ, ಶಂಕುತಲಾ ಸೊಂಳಕೆ, ಮರಿಯಮ್ಮ ಬಳ್ಳಾರಿ ಎಂಬ ತಾಯಂದಿರ ಮಕ್ಕಳಿಗೆ ಅಮಿತ್ ಶಾ ಪೋಲಿಯೋ ಲಸಿಕೆ ಹಾಕಿದ್ದು ವಿಶೇಷವಾಗಿತ್ತು.ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಡಿಸಿಎಂ ಗೋವಿಂದ ಕಾರಜೋಳ, ನಂದಕುಮಾರ ಸೇರಿದಂತೆ ಸ್ಥಳೀಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ