ಕೊಡಗು :
ವಿರಾಜಪೇಟೆ ನಟಿ ರಶ್ಮಿಕಾ ಮಂದಣ್ಣ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಇಂದು ಮುಂಜಾನೆ ಐಟಿ ಅಧಿಕಾರಿಗಳು ಮಂದಣ್ಣ ನಿವಾಸಕ್ಕೆ ಆಗಮಿಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಟ್ಯಾಕ್ಸಿ ಮೂಲಕ ಐಟಿ ಅಧಿಕಾರಿಗಳು ವಿರಾಜಪೇಟೆ ಪಟ್ಟಣದಲ್ಲಿರುವ ನಟಿ ನಿವಾಸದ ಮೇಲೆ ದಾಳಿ ಮಾಡಿ ಮನೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ