ಕೋಲ್ಕತ್ತಾ:
19 ವರ್ಷದ ಯುವಕನೋರ್ವ 6 ವರ್ಷದ ಬಾಲಕಿಯನ್ನು ಬಾತ್‍ರೂಮಿನಲ್ಲಿ ಕೂಡಿಹಾಕಿ ಅತ್ಯಾಚಾರ ಮಾಡಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
ಈ ಘಟನೆ ಗುರುವಾರ ನಡೆದಿದ್ದು, ಕೋಲ್ಕತ್ತಾದ ತಾರತಾಲ ರಸ್ತೆಯಲ್ಲಿರುವ ಕಟ್ಟಡದ ಮೊದಲ ಮಹಡಿಯಲ್ಲಿ ಬಾತ್‍ರೂಮ್ ಒಳಗೆ ಕೂಡಿಹಾಕಿಕೊಂಡು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಯುವಕ ಬಾಲಕಿಯ ಪಕ್ಕದಮನೆಯವನಾಗಿದ್ದು, ಬಾಲಕಿಯನ್ನು ಕರೆದುಕೊಂಡು ಹೋಗಿ ಈ ರೀತಿ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯು ಮನೆಗೆ ಬಂದು ಈ ವಿಚಾರವನ್ನು ತನ್ನ ತಾಯಿಗೆ ಹೇಳಿದೆ ನಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತಾಯಿ ನೀಡಿದ ದೂರಿನ ಮೇರೆಗೆ ನಾವು ಆರೋಪಿಯನ್ನು ಅರೆಸ್ಟ್ ಮಾಡಿದ್ದೇವೆ ಎಂದು ಹಿರಿಯ ಪೊಲೀಸರು ತಿಳಿಸಿದ್ದಾರೆ . ಬಾಲಕಿಯ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದೇವೆ. ವರದಿ ಬಂದ ನಂತರ ಮುಂದಿನ ತನಿಖೆಯನ್ನು ಆರಂಬಸಿತ್ತೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ