ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ

ರಾಯಚೂರು:

   ನಾಲ್ಕು ವರ್ಷದ ಬಾಲಕಿಯ ಮೇಲೆ ನಲವತ್ತು ವರ್ಷದ ಕಾಮುಕ ಅತ್ಯಾಚಾರ ಎಸಗಿರುವ  ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.   ಜಿಲ್ಲೆಯ ಸಿಂಧನೂರು ತಾಲೂಕಿನ ಆರ್.ಹೆಚ್.ಕ್ಯಾಂಪ್-2ರಲ್ಲಿ ಈ ಘಟನೆ ನಡೆದಿದೆ.  ಅಮುಲ್ ಮೋಹಲ್ದಾರ್ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪಿ.

ಬಾಲಕಿಯ ಮನೆಯವರು ಹೊಲಕ್ಕೆ ತೆರಳಿದ್ದನ್ನು ಗಮನಿಸಿ ಆತ, ಮನೆಯ ಬಳಿ ಆಟವಾಡುತ್ತಿದ್ದ ಮಗುವಿಗೆ ಚಾಕೋಲೆಟ್ ಕೊಡಿಸುವದಾಗಿ ಹೇಳಿ  ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ   ಕಳೆದ ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಅತ್ಯಾಚಾರಕ್ಕೆ ಒಳಗಾದ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿದ್ದಾಳೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link