ಚಾಮರಾಜನಗರ:
ಕೊಳ್ಳೇಗಾಲ ಪಟ್ಟಣದಲ್ಲಿ ಆಗಿಂದಾಗ್ಗೆ ಜರುಗುತ್ತಿದ್ದ ಬೈಕ್ ಕಳ್ಳತನಗಳ ಪ್ರಕರಣ ಬೆನ್ನಟ್ಟಿದ್ದ ಪೊಲೀಸರು ಮೂವರು ಕಳ್ಳರನ್ನು ಬಂಧಿಸಿದ್ದಾರೆ ಮತ್ತು ಒಂಭತ್ತು ಬೈಕ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಫಯಾಜ್ (27), ಇನಾಯತ್ ಪಾಷಾ (29) ಹಾಗೂ ಸಯ್ಯದ್ ನೂರ್ (25) ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 3.26 ಲಕ್ಷ ಬೆಲೆಬಾಳುವ ವಿವಿಧ ಕಂಪನಿಗಳ 9 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಎಚ್.ಡಿ. ಆನಂದ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ