ವಿಜಯಪುರ:ರಸ್ತೆ ಅಪಘಾತ ಮೂವರ ದುರ್ಮರಣ

ವಿಜಯಪುರ:

    ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ.

    ಮೃತರನ್ನು ಹೊಸಪೇಟೆ ಮೂಲದ ರಾಜೇಶ್​ (32), ಏಸುದಾಸ್​ (32) ಹಾಗೂ ಭುಜಂಗರಾವ್​ (38) ಮೃತರೆಂದು ಗುರುತಿಸಲಾಗಿದೆ.  ಘಟನೆ ಬಳಿಕ ಲಾರಿ ಬಿಟ್ಟು ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಕೂಡಗಿ ಎನ್​ಟಿಪಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ