ತಿರುವನಂತಪುರಂ:
ಶಬರಿಮಲೆಗೆ ಹೋಗುತ್ತಿದ್ದ ಮಹಿಳೆಯರ ಮೇಲೆ ವ್ಯಕ್ತಿಯೊಬ್ಬ ಪೆಪ್ಪರ್ ಸ್ಪ್ರೇ ಸಿಂಪಡಿಸಿದ ಘಟನೆ ಕೇರಳದ ಕೊಚ್ಚಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ನಡೆದಿದೆ.
This is so shocking. Pepper/ chilly spray was used against Bindu Ammini by a protestor near Cochin Commissioner office as she wanted to go to #SabarimalaTemple along with activist Trupti Desai and others.
Bindu had entered the temple last year with police protection. pic.twitter.com/BDUrmBSqFJ
— Shilpa Nair (@NairShilpa1308) November 26, 2019
ಈ ವರ್ಷದ ಜನವರಿ 2ರಂದು ಶಬರಿಮಲೆ ದೇವಸ್ಥಾನಕ್ಕೆ ಪ್ರತಿಭಟನೆಗಳ ಹೊರತಾಗಿಯೂ ಭೇಟಿ ನೀಡಲು ಸಫಲರಾಗಿದ್ದ ಇಬ್ಬರು ಮಹಿಳೆಯರಲ್ಲಿ ಒಬ್ಬರಾಗಿದ್ದ ಬಿಂದೂ ಅಮ್ಮಿನಿ ಮತ್ತೊಮ್ಮೆ ಸೋಮವಾರ ಶಬರಿಮಲೆ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ವ್ಯಕ್ತಿಯೊಬ್ಬ ಅವರಿಗೆ ಕೊಚ್ಚಿಯ ಪೊಲೀಸ್ ಆಯುಕ್ತರ ಕಚೇರಿಯ ಎದುರಿನಲ್ಲಿಯೇ ಪೆಪ್ಪರ್ ಸ್ಪ್ರೇ ಎರಚಿದ್ದಾನೆ.
Kerala: Bindu Ammini, one of the two women who first entered the #Sabarimala temple in January this year, says, "a man sprayed chilli and pepper at my face,"outside Ernakulam city police commissioner's office today morning. pic.twitter.com/lt2M58264k
— ANI (@ANI) November 26, 2019
ವಿಡಿಯೋದಲ್ಲಿ ಹೋರಾಟಗಾರ್ತಿ ಬಿಂದು ಅಮ್ಮಿಣಿ ತಮ್ಮ ಮುಖವನ್ನು ಮುಚ್ಚಿಕೊಂಡು ಹಲ್ಲೆ ಮಾಡಿದ ವ್ಯಕ್ತಿಯಿಂದ ದೂರ ಓಡಿ ಹೋಗುತ್ತಿದ್ದಾರೆ. ಹಲ್ಲೆಯಿಂದ ಅಮ್ಮಿಣಿಗೆ ಗಾಯವಾಗುತ್ತಿದ್ದಂತೆ ವ್ಯಕ್ತಿ ಕಾಂಪೌಂಡ್ ಹಾರಿ ಅಲ್ಲಿಂದ ಪರಾರಿಯಾಗಿದ್ದಾನೆ. ಹಲ್ಲೆಯಿಂದ ಗಾಯಗೊಂಡ ಅಮ್ಮಿಣಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಪೆಪ್ಪರ್ ಸ್ಪ್ರೇ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
