ಹಾಸನ:
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ ಒಬ್ಬ ಸಾವಿಗೀಡಾಗಿದ್ದು, 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಪಟ್ಟಣದ ಶ್ರೀಕಂಠಯ್ಯ ಸರ್ಕಲ್ ಬಳಿ ಜರುಗಿದೆ.
ಮೃತ ಯುವಕ ಅಭಿಷೇಕ್ (29) . ಈತ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಯುವಕ ಎಂದು ಗುರುತಿಸಲಾಗಿದೆ. ಇನ್ನು ಕೆಎಸ್ಆರ್ಟಿಸಿ ಬಸ್ ನಲ್ಲಿದ್ದ 46 ಮಂದಿ ಪ್ರಯಾಣಿಕರಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಸಾರಿಗೆ ಚಾಲಕನ ನಿರ್ಲಕ್ಷ್ಯ ಕೂಡ ಕಾರಣ ಎನ್ನಲಾಗುತ್ತಿದೆ.
ಶ್ರೀಕಂಠಯ್ಯ ವೃತ್ತದ ಬಳಿ ಹಾಕಲಾಗಿರುವ ಸ್ಪೀಡ್ ಬ್ರೇಕರ್ ಮೇಲೆ ನಿಧಾನವಾಗಿ ಚಲಿಸದೇ ಏಕಾಏಕಿ ರಭಸವಾಗಿ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಹಿರೀಸಾವೆ ಪೊಲೀಸರು ಮತ್ತು ಚನ್ನರಾಯಪಟ್ಟಣದ ಸಂಚಾರಿ ಪೊಲೀಸರು ಆಗಮಿಸಿ ಟ್ರಾಫಿಕ್ ಮುಕ್ತಗೊಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
