ನವದೆಹಲಿ :
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಅಮೇಥಿಯ ಜೊತೆಗೆ ಕೇರಳದ ವಯನಾಡು ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎನ್ನುವ ವಿಚಾರ ಅಧಿಕೃತವಾಗಿದೆ.
ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಪಕ್ಷದ ಹಿರಿಯ ನಾಯಕ ಎಕೆ ಆ್ಯಂಟನಿ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ಮೂಲಕ ಈ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ರಾಹುಲ್ ಗಾಂಧಿ ಕೇರಳದಿಂದ ಸ್ಪರ್ಧಿಸಲಿ ಎನ್ನುವ ಒತ್ತಾಯ ಕೇರಳ ಕಾಂಗ್ರೆಸ್ ನಾಯಕರಿಂದ ಈ ಹಿಂದೆ ಕೇಳಿ ಬಂದಿತ್ತು. ಆದರೆ ರಾಹುಲ್ ಇದಕ್ಕೆ ಒಪ್ಪಿರಲಿಲ್ಲ ಎನ್ನಲಾಗಿತ್ತು. ಆದರೀಗ ಅಮೇಥಿಯ ಜೊತೆಗೆ ವಯನಾಡು ಇಂದಲೂ ಸ್ಪರ್ಧಿಸುವುದು ಅಧಿಕೃತವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ