ಕೆರಾಡಿ ಶಾಲೆ ದತ್ತು ಪಡೆದ ಕಾಂತಾರದ ನಟ….!

ಕುಂದಾಪುರ:

   ಸಿನಿಮಾ ಮಂದಿ ಕೇವಲ ಸಿನಿಮಾದಲ್ಲಿ ಮಾತ್ರ ಆದರ್ಶವಂತರು ನಿಜ ಜೀವನದಲ್ಲಿ ಅಲ್ಲ ಎನ್ನುತ್ತಿದ್ದವರಿಗೆ ಇದು ಸುಳ್ಳು ಎಂದು ಕಾಂತಾರದ ಶಿವ ಸಾಬೀತು ಮಾಡಿದ್ದಾರೆ.

   ಇದಕ್ಕೆ ಪೂರಕವೆಂಬಂತೆ ತಾವು ಓದಿದ್ದ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದುಕೊಂಡಿದ್ದಾರೆ.

   ಇತ್ತೀಚಿಗೆ ಕೆರಾಡಿಗೆ ಭೇಟಿ ನೀಡಿದ್ದ ಅವರು, ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ಬಗ್ಗೆ ಮಾತನಾಡಿದ್ದರು. ಈ ವೇಳೆ ಗ್ರಾಮದ ಪ್ರಮುಖರು ರಿಷಭ್​ ಶೆಟ್ಟಿ ಅವರನ್ನು ಅಭಿನಂದಿಸಿ ಶುಭಹಾರೈಸಿದ್ದಾರೆ.

ಭಾನುವಾರ ನಡೆದ ಎಸ್‌ಡಿಎಂಸಿ ಸಭೆಯಲ್ಲಿ ರಿಷಬ್‌ ಶೆಟ್ಟಿ ಅವರು, ಶಾಲೆಯನ್ನು ದತ್ತು ತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿದರು.

ಮೂರು ದಶಕಗಳ ಹಿಂದೆ ಶಾಲೆಯಲ್ಲಿ 400 ಮಂದಿ ಮಕ್ಕಳಿದ್ದರು. ಆದರೆ ಪ್ರಸ್ತುತ 71 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಒಬ್ಬರು ಖಾಯಂ ಶಿಕ್ಷಕರಿದ್ದಾರೆ. ಉಳಿದವರು ಗೌರವ ಶಿಕ್ಷಕರಾಗಿದ್ದಾರೆ. ನಾನು ಸ್ವತಃ ಈ ಶಾಲೆಯ ಸ್ಥಿತಿಗತಿಯನ್ನು ತಿಳಿದುಕೊಂಡಿದ್ದು, ರಿಷಬ್‌ ಫೌಂಡೇಶನ್‌ ಮುಂದಿನ ಶೈಕ್ಷಣಿಕ ವರ್ಷದಿಂದ 5 ವರ್ಷಗಳ ಅವಧಿಗೆ ಈ ಶಾಲೆಯನ್ನು ದತ್ತು ಪಡೆದಿದೆ. ಮೂಲಭೂತ ಸೌಕರ್ಯ ಸಹಿತ ಕೊಠಡಿ, ಪ್ರತೀ ತರಗತಿಗೆ ಶಿಕ್ಷಕರು, ಆವರಣ ಗೋಡೆ, ಅಗತ್ಯವಿದ್ದರೆ ವಾಹನದ ವ್ಯವಸ್ಥೆ ಕಲ್ಪಿಸಲಿದೆ. ಇದಲ್ಲದೆ ಎಲ್‌ಕೆಜಿ – ಯುಕೆಜಿ, ನ್ಪೋಕನ್‌ ಇಂಗ್ಲಿಷ್‌ ಕಲಿಕೆ ಆರಂಭಿಸುವ ಯೋಜನೆಯಿದೆ ಎಂದು ಹೇಳಿದರು.

ರಿಷಬ್ ಶೆಟ್ಟಿಯವರು ಹೆಚ್ಚುವರಿ ಶಿಕ್ಷಕರ ನೇಮಕಹಾಗೂ ಸ್ಪೋಕನ್ ಇಂಗ್ಲಿಷ್ ತರಗತಿಯನ್ನು ಪರಿಚಯಿಸುವ ಮೂಲಕ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಬದಲಾಯಿಸಲು ಬಯಸುತ್ತಿದ್ದಾರೆ. ಶೀಘ್ರದಲ್ಲೇ ಇಲಾಖೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆಂದು ಉಡುಪಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿC

Recent Articles

spot_img

Related Stories

Share via
Copy link
Powered by Social Snap