ಬೆಂಗಳೂರು:
ರಾಜಧಾನಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದೆ. ಅದೇ ರೀತಿ ಜುಲೈ 21ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಜುಲೈ 22ರಂದು ರಾಜ್ಯದ ಎಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಜುಲೈ 23ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬಿರುಸಿನ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜುಲೈ 24ರಂದು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ.
