ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ಸರ್ಕಾರ ಆದೇಶ….!

ಉಡುಪಿ

    ನಾಡಿನ ಕಂಬಳ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಕಳೆದ ವರ್ಷ ಕಂಬಳಕ್ಕೆ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಬೇಡಿಕೆ ಸಲ್ಲಿಸಿದ್ದರು. ಸ್ವತಃ ಸ್ಪೀಕರ್ ಯುಟಿ ಖಾದರ್ ಕಂಬಳ ಪರ ಬ್ಯಾಟಿಂಗ್ ಮಾಡಿದ್ದರು. ಸರ್ಕಾರ ನೆರವು ಕೊಡದಿದ್ದರೆ ನಾವೇ ಹಣ ಸಂಗ್ರಹಿಸಿ ಕಂಬಳ ಮಾಡಲು ಗೊತ್ತು ಎಂದು ಚಾಟಿ ಬೀಸಿದ್ದರು.

ಕರವಾಳಿಯಲ್ಲಿ ಒಟ್ಟು 25 ಕಂಬಳಗಳು ನಡೆಯುತ್ತವೆ.

   ಪ್ರತಿ ಕಂಬಳವನ್ನು ನೇರವಾಗಿ ಒಂದು ಲಕ್ಷ ಜನ ವೀಕ್ಷಿಸುತ್ತಾರೆ. 2020 – 21ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ 10 ಕಂಬಳಗಳಿಗೆ ತಲಾ 5 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿತ್ತು. ಉಡುಪಿ ಜಿಲ್ಲೆಯಲ್ಲಿ ನಡೆಯುವ 53 ಸಾಂಪ್ರದಾಯಿಕ ಕಂಬಳಗಳಿಗೂ ಅನುದಾನ ಕೋರಲಾಗಿತ್ತು.

   ಕಳೆದ ವರ್ಷ 50 ಲಕ್ಷ ರೂ. ಘೋಷಿಸಿದ್ದ ಸರ್ಕಾರ ನಂತರ ಅನುದಾನ ನೀಡಿರಲಿಲ್ಲ. ಹಾಗಾಗಿ ಘೋಷಣೆಯಾದ 50 ಲಕ್ಷ ರೂ. ಹಣ ತುರ್ತಾಗಿ ಬಿಡುಗಡೆ ಮಾಡುವಂತೆ ಕಂಬಳ ಸಮಿತಿ ಒತ್ತಾಯಿಸಿದೆ. ಅದಲ್ಲದೆ ಸಾಂಪ್ರದಾಯಿಕ ಕಂಬಳಗಳಿಗೂ 50 ಲಕ್ಷ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. 

   ಕರಾವಳಿಯ ನಂತರ ಬೆಂಗಳೂರಿನಲ್ಲೂ ಕಂಬಳ ಸದ್ದು ಮಾಡಿದೆ. ಆದರೆ, ತುಳುನಾಡ ಜನಪದೀಯ ಹಿನ್ನಲೆಯ ಕಂಬಳ ಉಳಿದು ಬೆಳೆಯ ಬೇಕಾದರೆ ಕಂಬಳ ಪ್ರೀಯರ ಪ್ರೋತ್ಸಾಹ ಜೊತೆಗೆ ಜೊತೆಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನೆರವು ಕೂಡ ಅಗತ್ಯವಾಗಿದೆ.

Recent Articles

spot_img

Related Stories

Share via
Copy link