ನವದೆಹಲಿ:
ಅತ್ಯಂತ ದುರ್ಗಮ ಪ್ರದೇಶಗಳಲ್ಲಿ ಒಂದಾದ ಕಾರ್ಗಿಲ್ ನಲ್ಲಿ ನಡೆದ ಯುದ್ಧದಲ್ಲಿ ವಿಜಯ ಸಾಧಿಸಿದ 24ನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ಹುತಾತ್ಮ ವೀರ ಯೋಧರಿಗೆ ದೇಶದಾದ್ಯಂತ ಗೌರವ ಸಲ್ಲಿಸಲಾಗುತ್ತಿದ್ದು ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವಿಟರ್ ಮೂಲಕ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಕಾರ್ಗಿಲ್ ವಿಜಯ್ ದಿವಸ್ ಭಾರತದ ವೀರರ ಕಥೆಗಳನ್ನು ಹೇಳುತ್ತದೆ. ಅವರು ಯಾವಾಗಲೂ ದೇಶದ ಜನರಿಗೆ ಸ್ಫೂರ್ತಿಯಾಗಿರುತ್ತಾರೆ. ಈ ವಿಶೇಷ ದಿನದಂದು, ನಾನು ಅವರಿಗೆ ನಮಸ್ಕರಿಸುತ್ತೇನೆ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ