ಬೆಳಗಾವಿ :
ಹೊಸ ಕೊರೋನಾ ವೈರಸ್ ಆತಂಕ ಹೆಚ್ಚಾಗಿರುವ ಹಿನ್ನೆಲೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಿದೆ. ಆದರೆ, ಸಾರಿಗೆ ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಇರಲಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಇಂದು ರಾತ್ರಿಯಿಂದ ನೈಟ್ ಕರ್ಪ್ಯೂ ಜಾರಿಯಾಗಲಿದ್ದು, ಇಂತಹ ಸಂದರ್ಭದಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಸಂಚಾರ ರಾತ್ರಿ ವೇಳೆ ಇರೋದಿಲ್ಲ ಎನ್ನಲಾಗುತ್ತಿತ್ತು. ಆದ್ರೇ ಇದಕ್ಕೆ ತೆರೆ ಎಳೆದಿರುವಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ರಾಜ್ಯ ರಸ್ತೆ ಸಾರಿಗೆ ಸಂಚಾರದಲ್ಲಿ ರಾತ್ರಿ ಕರ್ಪ್ಯೂ ಇದ್ದರೂ ಯಾವುದೇ ವ್ಯತ್ಯಾಸವಾಗುವುದಿಲ್ಲ. ನೈಟ್ ಕರ್ಪ್ಯೂ ಇದ್ದರೂ, ಯಥಾಸ್ಥಿತಿಯಲ್ಲಿ ರಾಜ್ಯದಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಗಳ ಸಂಚಾರ ಇರಲಿದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಸಾರಿಗೆ ಸಂಚಾರದಲ್ಲಿ ಯಾವುದೇ ಬಂದ್ ಆಗೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಯುಕೆ ಹೊಸ ಕೊರೋನಾ ವೈರಸ್ ಸೋಂಕಿನ ಹಿನ್ನಲೆಯಲ್ಲಿ ಇಂದು ರಾತ್ರಿ 10 ಗಂಟೆಯಿಂದ ರಾಜ್ಯಾಧ್ಯಂತ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ರಾತ್ರಿ 10ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ತುರ್ತು ಅವಶ್ಯಕತೆ ಹೊರತಾಗಿ ಎಲ್ಲವೂ ಬಂದ್ ಆಗಲಿದೆ ಎನ್ನಲಾಗುತ್ತಿತ್ತು. ಅಲ್ಲದೇ ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ಮೆಟ್ರೋ ರಾತ್ರಿ ಸಂಚಾರ ಸ್ಥಗಿತಗೊಳ್ಳಲಿದೆ ಎನ್ನಲಾಗುತ್ತಿತ್ತು. ಇದೀಗ ಈ ವಿಷಯಕ್ಕೆ ಸ್ಪಷ್ಟತೆ ಸಿಕ್ಕಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
