ಬೆಂಗಳೂರು:
2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು. ಬಳಿಕ ಸುದ್ದಿಗಾರರಿಗೆ ಬಜೆಟ್ ಮಂಡನೆಯ ಬಗ್ಗೆ ಮಾಹಿತಿ ನೀಡಿದರು.
