ಮಧುಗಿರಿ :
ಮಹಾರಾಷ್ಟ್ರ ರಾಜ್ಯ ದಲ್ಲಿ ಕನ್ನಡಿಗರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ರಾಜ್ಯದಲ್ಲಿ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಪಟ್ಟಣದಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ.ಪಟ್ಟಣದಲ್ಲಿ ಎಂದಿನಂತೆ ಅಂಗಡಿ ಮುಂಗಟ್ಟುಗಳು , ಶಾಲಾ ಕಾಲೇಜುಗಳು ತೆರೆದಿದ್ದು, ಖಾಸಗಿ ಬಸ್ ಹಾಗೂ ಸರ್ಕಾರಿ ಬಸ್ ಗಳು ಸಂಚಾರ ನಡೆಸಿದವು.
ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿರುವುದರಿಂದ ಸರ್ಕಾರಿ ಶಾಲೆಗಳಲ್ಲಿ ನಾಳಿನ ವಿಷಯಕ್ಕೆ ರಿವೀಷನ್ ತರಗತಿಗಳನ್ನು ನಡೆಸಲಾಗುತ್ತಿರುವುದು ಕಂಡು ಬಂದವು.ಇನ್ನೂ ಕರ್ನಾಟಕ ಬಂದ್ ಗೆ ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಗಳು ಪದಾಧಿಕಾರಿಗಳು ಪಟ್ಟಣದಲ್ಲಿ ಕಂಡು ಬಂದಿಲ್ಲ. ನಾಲ್ಕನೇ ಶನಿವಾರದ ಪ್ರಯುಕ್ತ ಎಲ್ ಐ ಸಿ , ಬ್ಯಾಂಕ್ ಗಳು ಬಾಗಿಲು ಮುಚ್ಚಿದ್ದು ಬಂದ್ ಸಾರ್ವಜನಿಕ ರಿಂದ ಯಾವುದೇ ರೀತಿಯ ಬೆಂಬಲ ವ್ಯಕ್ತವಾಗಿಲ್ಲ.
