ಬೆಂಗಳೂರು :
ಶಿಕ್ಷಕರನ್ನು ಮತಗಟ್ಟೆ ಮಟ್ಟದ ಅಧಿಕಾರಿ-ಬಿಎಲ್‌ಒ ದಂತಹ ಕರ್ತವ್ಯಗಳಿಂದ ವಿಮುಕ್ತಿಗೊಳಿಸುವಂತೆ ಮುಖ್ಯ ಚುನಾವಣಾ ಅಧಿಕಾರಿಗೆ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.
ಶಿಕ್ಷಕರ ಪರ ನಿಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್, ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸುವುದರಿಂದ ಹೆಚ್ಚಿನ ಸಮಯ ವ್ಯಯವಾಗಿ ಸಕಾಲದಲ್ಲಿ ಪಠ್ಯಕ್ರಮ ಮುಗಿಸಲು ಶಿಕ್ಷಕರು ಪ್ರಯಾಸ ಪಡುವಂತಾಗಿದೆ. ಹಾಗೆಯೇ, ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ನಿಗಾವಹಿಸಲು ಮತ್ತು ಶಾಲಾ ಚಟುವಟಿಕೆಗಳ ಮೇಲೆ ಪೂರ್ಣ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ. ಇದರಿಂದಾಗಿ ವಿದ್ಯಾರ್ಥಿ ಸಮೂಹಕ್ಕೆ ಪರೋಕ್ಷವಾಗಿ ಹೊಡೆತ ಬೀಳುವಂತಾಗಿದೆ. ಎಂದು ವಿವರಿಸಿದ್ದಾರೆ.
ಶಿಕ್ಷಕರು ಸಂಪೂರ್ಣವಾಗಿ ವಿದ್ಯಾರ್ಥಿಗಳ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಮುಖ್ಯ ಚುನಾವಣಾಧಿಕಾರಿಗೆ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
