ಇಷ್ಟುದಿನ ಮಳೆರಾಯನ ಅಬ್ಬರ ಈಗ ಚಳಿಗೆ ನಡುಗುತ್ತಿದೆ ಕರ್ನಾಟಕ…!

ಬೆಂಗಳೂರು :

   ಇಷ್ಟು ದಿನ ಮಳೆರಾಯನ ಆರ್ಭಟಕ್ಕೆ ನಡುಗಿದ ಕರ್ನಾಟಕ ಈಗ ಚಳಿಯಿಂದ ನಡುಗುವ ಸಮಯ ಬಂದಿದೆ . ಕರ್ನಾಟಕದ ವಿವಿಧಡೆ ಚಳಿ ಜೋರಾಗಿದೆ. ಡಿಸೆಂಬರ್​ ಮತ್ತು ಜನವರಿ ಅಂತ್ಯದವರೆಗೆ ಚಳಿಯ ಅಬ್ಬರ ಜೋರಾಗುವ ಸಾಧ್ಯತೆ ಇದೆ. ವಾಡಿಕೆಗಿಂತ 2 ರಿಂದ 3 ಡಿಗ್ರಿಯಷ್ಟು ​ನಷ್ಟು ಉಷ್ಣಾಂಶ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು (ನ.22) ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಂಟಿಗ್ರೆಡ್​ಗಿಂತ ಕಳೆಗೆ ಇದೆ.

   ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್​, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಕಲಬುರಗಿ ಕೆಲವು ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್​ವರಗೂ ಇಳಿಕೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ಹೇಳಿದೆ.

   ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಶುಕ್ರವಾರ 28 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ, ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಇನ್ನು, ಮಂಗಳೂರಿನಲ್ಲಿ ಗರಿಷ್ಠ 33, ಕನಿಷ್ಠ 24, ಶಿವಮೊಗ್ಗದಲ್ಲಿ ಗರಿಷ್ಠ 31 ಮತ್ತು ಕನಿಷ್ಠ 16, ಬೆಳಗಾವಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16, ಮೈಸೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್​ನಷ್ಟು ತಪಾಮಾನ ವರದಿಯಾಗಲಿದೆ.

   ಕಳೆದ 24 ಗಂಟೆಯಲ್ಲಿ ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 35.5 ಡಿಗ್ರಿ ಸೆಲ್ಸಿಯಸ್​ ಮತ್ತು ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 12.2 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ರಾಯಚೂರು, ಗದಗ, ಬದಾಮಿ ಮತ್ತು ಬಾಗಲಕೋಟೆ, ಧಾರವಾಡ, ಕಲಬುರಗಿ, ಬೆಳಗಾವಿ ಮತ್ತು ಬೆಂಗಳೂರು ಎಲೆಕ್ಟ್ರಾನಿಕ್​ ಸಿಟಿಯಲ್ಲಿ 15 ಡಿಗ್ರಿ ಸೆಲ್ಸಿಯಸ್​ಗಿಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಬೆಳಗಿನ ಜಾಔ ಮಂಜು ಅಥವಾ ಇಬ್ಬನಿ ಬಿದ್ದಿದೆ. ಇನ್ನು ನವೆಂಬರ್​ 26 ಮತ್ತು 27 ರಂದು ದಕ್ಷಿಣ ಒಳನಾಡಿನ ಮಳೆಯಾಗುವ ಸಾಧ್ಯತೆ ಇದೆ.

Recent Articles

spot_img

Related Stories

Share via
Copy link